ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೆನಾದರೂ ಬಲ್ಲಿರಾ. ಕನಕದಾಸರು
ಕನಕದಾಸ ಜಯಂತಿ ಸಂಭ್ರಮ
ನಮ್ಮ ಶಾಲೆಯಲ್ಲಿ ದಿನಾಂಕ 18/11/2024 ರಂದು ಕನಕದಾಸ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನದಂದು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಪ್ರಾರಂಭವನ್ನು ಬೆಳಗಿನ ಪ್ರಾರ್ಥನೆಯೊಂದಿಗೆ ಮಾಡಲಾಯಿತು. ಅದರ ನಂತರ ಕನಕದಾಸರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಅವರ ಜೀವನ ಮತ್ತು ಸಾಧನೆಗಳ ಕುರಿತು ಮಾತನಾಡಲಾಯಿತು. ನಮ್ಮ ಶಿಕ್ಷಕರು ಮತ್ತು ಕೆಲ ವಿದ್ಯಾರ್ಥಿಗಳು ಕನಕದಾಸರ ಸಾಹಿತ್ಯ ಮತ್ತು ಅವರ ಸಂದೇಶಗಳನ್ನು ನಮ್ಮೆದುರು ಮಂಡಿಸಿದರು. ವಿದ್ಯಾರ್ಥಿಗಳು ಕನಕದಾಸರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅನುಸರಿಸುವ ಶಕ್ತಿ ಪಡೆದರು.
Comments
Post a Comment