Parents Teacher meeting
ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆ ಹೆಬ್ಬಳ್ಳಿ .ದಿನಾಂಕ 20-11-2024 ರಂದು ಪಾಲಕ ಪೋಷಕರ ಸಭೆ ನಡೆಯಿತು. ಈ ಒಂದು ಸಭೆಗೆ SDMCಯ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಹಾಜರಿದ್ದರು .ಜೊತೆಗೆ ಶಾಲೆಯ ಸಾಮಾನ್ಯ ಸ್ಥಾಯಿ ಸಮಿತಿಯ ಸದಸ್ಯ ರು ಹಾಜರಿದ್ದರು. ಕೆಜಿಎಸ್ ಶಾಲೆಯ ಎಸ್ ಡಿಎಂಸಿ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ವರು ತಾವು ಕಲಿತ ಶಾಲೆಯ ಬಗ್ಗೆ ಅವರ ಅಪಾರ ಕಾಳಜಿ ಗೌರವ ಹೊಂದಿ ಶಾಲೆಗೆ ಆಗಮಿಸಿ, ಶಾಲೆಯ ಅಭಿವೃದ್ಧಿ ಕಾರ್ಯಗಳು ಶೈಕ್ಷಣಿಕ ಪ್ರಗತಿ ಹಾಗೂ ಭೌತಿಕ ಸುಧಾರಣೆಗಳ ಕುರಿತು ಸೂಕ್ತ ಸಲಹೆ ಮಾರ್ಗದರ್ಶನ ನೀಡಿದರು. ಸಭೆಗೆ ಆಗಮಿಸಿದ ಪಾಲಕ ಪೋಷಕರು ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿ ವಿಚಾರಿಸಿ ಸೂಕ್ತ ಮಾರ್ಗದರ್ಶನ ಪಡೆದರು. ಶಾಲೆಯ ಸ್ಮಾರ್ಟ್ ಕ್ಲಾಸ್ ನಿಯಮಿತವಾಗಿ ನಡೆಯಲು ಜೊತೆಗೆ ಶಾಲೆಯ ಅಭಿವೃದ್ಧಿ ಶೈಕ್ಷಣಿಕ ಪ್ರಗತಿ ಕಾರ್ಯಗಳ ಕುರಿತು ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.
Comments
Post a Comment