ಇಂದು ದಿನಾಂಕ 17.01.2025ರಂದು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತಿಮ್ಮಾಪುರದಲ್ಲಿ ರಸ್ತೆ ಸುರಕ್ಷಾ ಸಪ್ತಾಹ, ಪೋಕ್ಸೋ ಕಾಯ್ದೆ & ಬಾಲ್ಯ ವಿವಾಹ ತಡೆ ಕಾಯ್ದೆಯ ಕುರಿತು ಸಮಗ್ರ ಮಾಹಿತಿಯನ್ನು PSI ಶ್ರೀಮತಿ ಆರ್ ಬಿ ಐರಾಣಿ, ಹಾಗೂ ಪೊಲೀಸ್ ಸಿಬ್ಬಂದಿ ಶ್ರೀ ವಿಜಯಕುಮಾರ್ ರವರು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಮನಮುಟ್ಟುವಂತೆ ತಿಳಿಸಿದರು.
ಶಾಲಾ ಸ್ಕೌಟ್ಸ್ ಹಾಗೂ ಗೈಡ್ಸ್ ದಳಗಳು ಪೊಲೀಸ್ ಅಧಿಕಾರಿಗಳಿಗೆ ಗೌರವ ಸಲ್ಲಿಸಿ, ಪರೇಡ್ ಪ್ರದರ್ಶನ ಮಾಡಿದವು, ರಸ್ತೆ ಸುರಕ್ಷತಾ ಸಪ್ತಾಹ ಪ್ರಯುಕ್ತ ಗ್ರಾಮದಲ್ಲಿ ಪಥಸಂಚಲನ ಕೈಗೊಳ್ಳಲಾಯಿತು, ಪೊಲೀಸ್ ಅಧಿಕಾರಿಗಳು ಸ್ಕೌಟ್ಸ್ ಹಾಗೂ ಗೈಡ್ಸ್ ದಳದ ಶಿಸ್ತಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಕಾಲಕ್ಕೆ ಗ್ರಾಮ ಪಂಚಾಯಿತಿ ಸದಸ್ಯರು,ಶಾಲಾ ಎಸ್‌ಡಿಎಂಸಿ ಕಮಿಟಿಯ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ, ಗ್ರಾಮಸ್ಥರು ಹಾಜರಿದ್ದು ಕಾರ್ಯಕ್ರಮವನ್ನು ಸಂಪೂರ್ಣ ಯಶಸ್ವಿಗೊಳಿಸಿದರು
Comments
Post a Comment