ಸ್ವಾತಂತ್ರ್ಯ ದಿನದ ಆಚರಣೆ
ನಮ್ಮ ಯಾದ್ವಾಡ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನವನ್ನು ಬಹಳ ಸಂತೋಷದಿಂದ ಮತ್ತು ಗೌರವದಿಂದ ಆಚರಿಸಲಾಯಿತು. ಬೆಳಗಿನ ಜಾವ ವಿದ್ಯಾರ್ಥಿಗಳು ಶಾಲೆಗೆ ಸ್ವಚ್ಛವಾದ ಉಡುಪಿನಲ್ಲಿ ಬಂದು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮುಖ್ಯ ಅತಿಥಿಗಳ ಸಮ್ಮುಖದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲಾಯಿತು ಮತ್ತು ಎಲ್ಲರೂ ಒಂದೇ ಧ್ವನಿಯಲ್ಲಿ ರಾಷ್ಟ್ರಗೀತೆ ಹಾಡಿ ದೇಶಪ್ರೇಮವನ್ನು ತೋರಿಸಿದರು. ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ದೇಶಭಕ್ತಿ ಗೀತೆಗಳನ್ನು ಹಾಡಿದರು, ಮತ್ತು ಸ್ವಾತಂತ್ರ್ಯ ಹೋರಾಟಗಾರರ ಜೀವನಚರಿತ್ರೆಯನ್ನು ವಿವರಿಸಿದರು. ಶಿಕ್ಷಕರು ಮಕ್ಕಳನ್ನು ಹುರಿದುಂಬಿಸಿ, ಸ್ವಾತಂತ್ರ್ಯದ ಮಹತ್ವ ಮತ್ತು ಹೋರಾಟಗಾರರ ತ್ಯಾಗವನ್ನು ನೆನಪಿಸಿದರು. ಈ ದಿನದ ಆಚರಣೆ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಏಕತೆ, ಶಿಸ್ತು ಹಾಗೂ ಉತ್ತಮ ನಾಗರಿಕರ ಗುಣಗಳನ್ನು ಬೆಳೆಸುವಲ್ಲಿ ಸಹಾಯ ಮಾಡಿತು. ಮಕ್ಕಳ ಮುಖದಲ್ಲಿ ಸಂತೋಷ ಕಂಗೊಳಿಸುತ್ತಿತ್ತು ಮತ್ತು ಅವರು ತಮ್ಮ ಭಾರತ ದೇಶದ ಬಗ್ಗೆ ಹೆಮ್ಮೆಪಟ್ಟರು.
Thank you....
Comments
Post a Comment