ನಮ್ಮ ಶಾಲೆಯಲ್ಲಿ ಗಣಿತ ದಿನಾಚರಣೆಯನ್ನು ಕೆಲ ಅನಿವಾರ್ಯ ಕಾರಣಗಳಿಂದ ಸ್ವಲ್ಪ ತಡವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಗಣಿತಕ್ಕೆ ಸಂಬಂಧಿಸಿದ ಉತ್ತಮ ಹಾಗೂ ಸೃಜನಾತ್ಮಕ TLMಗಳು ಮತ್ತು ಮಾದರಿಗಳನ್ನು ತಯಾರಿಸಿ ಪ್ರದರ್ಶಿಸುವ ಮೂಲಕ ಎಲ್ಲಾ ಶಿಕ್ಷಕರ ಗಮನ ಸೆಳೆದರು.
ಗಣಿತವು ಕಬ್ಬಿಣದ ಕಡಲೆಯಲ್ಲ, ಅದು ಕಬ್ಬಿನ ಹಾಲಿನಂತಿದ್ದು — ಅದನ್ನು ಆಟಗಳ ಮೂಲಕ, ಮನೋರಂಜನಾ ಚಟುವಟಿಕೆಗಳ ಮೂಲಕ ಕಲಿಯುತ್ತಾ ಅದರ ಸೊಬಗು ಮತ್ತು ರುಚಿಯನ್ನು ಅನುಭವಿಸಬಹುದೆಂಬ ಸಂದೇಶವನ್ನು ಈ ಕಾರ್ಯಕ್ರಮದ ಮೂಲಕ ನೀಡಲಾಯಿತು.
ಈ ಸಂದರ್ಭದಲ್ಲಿ ಮಹಾನ್ ಗಣಿತಜ್ಞರಾದ ಶ್ರೀನಿವಾಸ ರಾಮಾನುಜನ್ ಅವರ ಜೀವನ ಪರಿಚಯ ಹಾಗೂ ಅವರ ಗಣಿತ ಕ್ಷೇತ್ರದಲ್ಲಿನ ಅಪಾರ ಸಾಧನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.
ಕಾರ್ಯಕ್ರಮದ ಅಂತ್ಯದಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸುವ ಮೂಲಕ ಗಣಿತ ದಿನಾಚರಣೆಯನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಲಾಯಿತು

Comments
Post a Comment