ಶಾಲೆಯು ಒಂದು ಸುಂದರವಾದ ಪರಿಸರವಾಗಿದ್ದು, ಅದನ್ನು ಜಾಗೃತಿಯಿಂದ ಹಾಗೂ ಸ್ವಚ್ಛತೆಯಿಂದ ಕಾಪಾಡಿಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಯಲ್ಲಿ WWF ನ ಮಿಷನ್ ಪ್ರಕೃತಿ ಕಾರ್ಯಕ್ರಮದ ಅಡಿಯಲ್ಲಿ ಎರಡನೇ ಹಂತದ ಚಟುವಟಿಕೆಯನ್ನು ಹಮ್ಮಿಕೊಳ್ಳಲಾಯಿತು.
ಈ ಚಟುವಟಿಕೆಯ ಮುಖ್ಯ ಉದ್ದೇಶವಾಗಿ ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಿ ಇಡುವುದು ಎಂಬ ಉತ್ತಮ ಅಭ್ಯಾಸವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಹಾಗೂ ಅವರನ್ನು ಈ ಕಾರ್ಯಕ್ಕೆ ಪ್ರೋತ್ಸಾಹಿಸುವುದಾಗಿತ್ತು. ಈ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲಾಯಿತು.

Comments
Post a Comment